ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer.

ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ ರಿಯಾಯಿತಿ ಯೋಜನೆಯಡಿ ಸಾಲ ಪಡೆದ ಗ್ರಾಹಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಬಡ್ಡಿ ವಸೂಲಿ ಮಾಡಿದ ಪ್ರಕರಣದಲ್ಲಿ ಹೊಸನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ.

ಸಾಗರ ತಾಲೂಕಿನ ಶಂಕರಪ್ರಸಾದ್ ಕೆ.ಎಸ್. ಅವರು 2013ರಲ್ಲಿ ಹೊಸನಗರದ ಎಸ್‌ಬಿಐ ಶಾಖೆಯಲ್ಲಿ ಕೇಂದ್ರ ವಲಯ ಬಡ್ಡಿ ರಿಯಾಯಿತಿ ಯೋಜನೆ–2009ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದರು. ಯೋಜನೆಯ ನಿಯಮದಂತೆ, ಸಾಲದ ಅವಧಿ ಪೂರ್ಣಗೊಳ್ಳುವ 30 ಮೇ 2018ರವರೆಗೆ ಬರುವ ಬಡ್ಡಿಯನ್ನು ಕೇಂದ್ರ ಸರ್ಕಾರವೇ ಭರಿಸಬೇಕಾಗಿತ್ತು.

ಆದರೆ, ಸಾಲದ ಅವಧಿ ಮುಗಿದ ಬಳಿಕ ಹೊಸನಗರದ ಎಸ್‌ಬಿಐ ಶಾಖೆ ಗ್ರಾಹಕರಿಂದ ನಿಯಮಬಾಹಿರವಾಗಿ ₹41,199 ಹೆಚ್ಚುವರಿ ಬಡ್ಡಿ ವಸೂಲಿ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಕುರಿತು ಗ್ರಾಹಕರು ಹಲವು ಬಾರಿ ಬ್ಯಾಂಕ್‌ಗೆ ಖುದ್ದಾಗಿ ಭೇಟಿ ನೀಡಿ ಹಾಗೂ ಇ-ಮೇಲ್ ಮೂಲಕ ಮನವಿ ಸಲ್ಲಿಸಿದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಟಿ. ಶಿವಣ್ಣ ಹಾಗೂ ಸದಸ್ಯ ಬಿ.ಡಿ. ಯೋಗಾನಂದ ಭಾಂಡ್ಯ ಅವರನ್ನೊಳಗೊಂಡ ಪೀಠವು ಬ್ಯಾಂಕ್ ಸೇವಾ ನ್ಯೂನತೆ ಎಸಗಿರುವುದು ಸ್ಪಷ್ಟವಾಗಿದೆ ಎಂದು ತೀರ್ಪು ನೀಡಿದೆ.


ಆಯೋಗವು ಗ್ರಾಹಕರ ದೂರನ್ನು ಭಾಗಶಃ ಪುರಸ್ಕರಿಸಿ, ಕಾನೂನುಬಾಹಿರವಾಗಿ ವಸೂಲಿ ಮಾಡಿದ ₹41,199 ಅನ್ನು 31 ಜುಲೈ 2024ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ.7 ಬಡ್ಡಿಯೊಂದಿಗೆ 45 ದಿನಗಳೊಳಗೆ ಮರುಪಾವತಿಸಬೇಕು ಎಂದು ಆದೇಶಿಸಿದೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ, ಸಂಪೂರ್ಣ ಮೊತ್ತ ಪಾವತಿಯಾಗುವವರೆಗೆ ವಾರ್ಷಿಕ ಶೇ.10 ಬಡ್ಡಿ ನೀಡಬೇಕು ಎಂದು ಸೂಚಿಸಿದೆ.

ಇದಲ್ಲದೆ, ಗ್ರಾಹಕರಿಗೆ ಉಂಟಾದ ಮಾನಸಿಕ ಹಿಂಸೆಗಾಗಿ ₹25,000 ಪರಿಹಾರ ಹಾಗೂ ಪ್ರಕರಣದ ಕಾನೂನು ಹೋರಾಟದ ವೆಚ್ಚಕ್ಕಾಗಿ ₹10,000 ಪಾವತಿಸುವಂತೆ ಆಯೋಗ ಆದೇಶಿಸಿದೆ. ಈ ಪರಿಹಾರದ ಮೊತ್ತವನ್ನೂ 45 ದಿನಗಳೊಳಗೆ ಪಾವತಿಸದಿದ್ದರೆ ಅದಕ್ಕೂ ವಾರ್ಷಿಕ ಶೇ.10 ಬಡ್ಡಿ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

17 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

17 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

17 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

23 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

23 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago