Categories: crime news

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district.

ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಭದ್ರಾಪುರ ಗ್ರಾಮಕ್ಕೆ ತೆರಳುವ ರಸ್ತೆಯ ಓವರ್‌ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರ ಟೌನ್ ಪೊಲೀಸರು ದಾಳಿ ನಡೆಸಿದರು.

ಕಾರ್ಯಾಚರಣೆಯ ವೇಳೆ 36 ವರ್ಷದ ಮಹಮ್ಮದ್ ಗೌಸ್ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಸುಮಾರು ₹3,000 ಮೌಲ್ಯದ 113 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

6 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

6 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

6 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

18 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

19 hours ago