ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ
A 19-year-old ITI student died in a tragic road accident near Kumudvati Bridge in Shikaripura while returning home after completing his examination. A case has been registered by Shikaripura Town Police.
ಆನಂದಪುರ : ಶಿಕಾರಿಪುರ ಪಟ್ಟಣದ ಕುಮುದ್ವತಿ ನದಿ ಸೇತುವೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಟಿಐ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಸಾಗರ ತಾಲೂಕಿನ ಗೌತಮಪುರ ಗ್ರಾಮದ ಮಂಜುನಾಥ್ ಬಿನ್ ಚೌಡಪ್ಪ ಅವರ ಪುತ್ರ ಮಿಲನ್ (19) ಎಂದು ಗುರುತಿಸಲಾಗಿದೆ.
ಮಿಲನ್ ಐಟಿಐ ಪರೀಕ್ಷೆ ಬರೆಯಲು ಶಿರಾಳಕೊಪ್ಪಕ್ಕೆ ತೆರಳಿದ್ದು, ಪರೀಕ್ಷೆ ಮುಗಿಸಿಕೊಂಡು ಬೈಕ್ ನಲ್ಲಿ ಗೌತಮಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕುಮುದ್ವತಿ ಸೇತುವೆ ಸಮೀಪ ಮಿಲನ್ ಚಲಾಯಿಸುತ್ತಿದ್ದ ಬೈಕ್‌ಗೆ ಶಿಕಾರಿಪುರ ಕಡೆಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಮಿಲನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಕುರಿತು ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…