Headlines

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

Screenshot 2026 07 21 19 49 29 399 com.picsart.studio edit

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well.

ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರತೆಗೆದಿದ್ದಾರೆ.

ತಾಲ್ಲೂಕಿನ ನಿಂಬೆಗೊಂದಿ ಗ್ರಾಮದ ಯಶೋದಮ್ಮ (48), ಇಬ್ಬರು ಮಕ್ಕಳ ತಾಯಿ, ತೀವ್ರ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಜುಲೈ 19ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಹೆಚ್ಚಾದ ಕಾರಣ ವೈದ್ಯರು ಸ್ಕ್ಯಾನಿಂಗ್ ನಡೆಸಿದಾಗ ಅವರ ಬಲ ಭಾಗದ ಅಂಡಾಶಯದಲ್ಲಿ ದೊಡ್ಡ ಗಡ್ಡೆ ಇರುವುದು ಪತ್ತೆಯಾಯಿತು.

ಇದಾದ ಬಳಿಕ ಮಂಗಳವಾರ (ಜುಲೈ 21) ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಡಾ. ಶ್ರೀನಿವಾಸ್, ಸ್ತ್ರೀರೋಗ ತಜ್ಞ ಡಾ. ಪ್ರಕಾಶ್, ಅರವಳಿಕೆ ತಜ್ಞೆ ಡಾ. ಲೀಲಾವತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ತಂಡ ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದರು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮಹಿಳೆಯ ಹೊಟ್ಟೆಯಿಂದ ಸುಮಾರು 8.38 ಕೆಜಿ ತೂಕದ ಗಡ್ಡೆಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಪ್ರಸ್ತುತ ರೋಗಿಯ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.