ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ
Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well.
ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರತೆಗೆದಿದ್ದಾರೆ.
ತಾಲ್ಲೂಕಿನ ನಿಂಬೆಗೊಂದಿ ಗ್ರಾಮದ ಯಶೋದಮ್ಮ (48), ಇಬ್ಬರು ಮಕ್ಕಳ ತಾಯಿ, ತೀವ್ರ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಜುಲೈ 19ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಹೆಚ್ಚಾದ ಕಾರಣ ವೈದ್ಯರು ಸ್ಕ್ಯಾನಿಂಗ್ ನಡೆಸಿದಾಗ ಅವರ ಬಲ ಭಾಗದ ಅಂಡಾಶಯದಲ್ಲಿ ದೊಡ್ಡ ಗಡ್ಡೆ ಇರುವುದು ಪತ್ತೆಯಾಯಿತು.
ಇದಾದ ಬಳಿಕ ಮಂಗಳವಾರ (ಜುಲೈ 21) ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಡಾ. ಶ್ರೀನಿವಾಸ್, ಸ್ತ್ರೀರೋಗ ತಜ್ಞ ಡಾ. ಪ್ರಕಾಶ್, ಅರವಳಿಕೆ ತಜ್ಞೆ ಡಾ. ಲೀಲಾವತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ತಂಡ ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದರು.
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮಹಿಳೆಯ ಹೊಟ್ಟೆಯಿಂದ ಸುಮಾರು 8.38 ಕೆಜಿ ತೂಕದ ಗಡ್ಡೆಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಪ್ರಸ್ತುತ ರೋಗಿಯ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…