w
Headlines
Home » ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

Screenshot 2026 07 08 13 07 25 429 com.picsart.studio edit

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

Four people have been arrested in connection with the disappearance of a minor girl in Shikaripura. Police suspect the body was buried near Jog, and further investigation is underway.

ಶಿಕಾರಿಪುರ: ಕಳೆದ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಇಟ್ಟಿಗೆಹಳ್ಳಿಯ ಗಂಗಾನಾಯ್ಕ, ಶಿಕಾರಿಪುರ ಪಟ್ಟಣದ ಸೌಭಾಗ್ಯ, ನ್ಯಾಮತಿ ತಾಲೂಕಿನ ಸೋಗಿಲು ಗ್ರಾಮದ ಪೂರಾನಾಯ್ಕ ಹಾಗೂ ರಂಜಿತಾ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಶಿಕಾರಿಪುರ ಪಟ್ಟಣದ ಪಿ.ಜಿ. (ಪೇಯಿಂಗ್ ಗೆಸ್ಟ್) ಒಂದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಕಳೆದ ವರ್ಷ ನಾಪತ್ತೆಯಾಗಿದ್ದಳು. ಈ ಕುರಿತು ಇತ್ತೀಚೆಗೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿತ್ತು.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಜೋಗ ಸಮೀಪದ ಅಜ್ಞಾತ ಸ್ಥಳದಲ್ಲಿ ಶವವನ್ನು ಹೂತಿಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಬಾಲಕಿಯನ್ನು ಕೊಲೆ ಮಾಡಿ ಶವವನ್ನು ಹೂತಿಟ್ಟಿರುವ ಸಾಧ್ಯತೆಯನ್ನೂ ಪೊಲೀಸರು ತಳ್ಳಿಹಾಕಿಲ್ಲ.

ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೇ ಸಾವಿನ ನಿಖರ ಕಾರಣ ಹಾಗೂ ಪ್ರಕರಣದ ಸತ್ಯಾಂಶ ಬಹಿರಂಗವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.