ಮಾದಕ ವಸ್ತು ಮಾರಾಟಕ್ಕೆ ಯತ್ನ – 1.2 ಕೆಜಿ ಗಾಂಜಾ ಸಮೇತ ಆರೋಪಿ ವಶಕ್ಕೆ

ಮಾದಕ ವಸ್ತು ಮಾರಾಟಕ್ಕೆ ಯತ್ನ – 1.2 ಕೆಜಿ ಗಾಂಜಾ ಸಮೇತ ಆರೋಪಿ ವಶಕ್ಕೆ

A 24-year-old man was arrested in Shivamogga for allegedly attempting to sell 1.207 kg of ganja. Doddapete Police seized the contraband worth approximately ₹65,000 and registered a case under the NDPS Act.

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಎನ್.ಟಿ. ರಸ್ತೆಯ ನಮೋ ಶಂಕರ್ ಲೇಔಟ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಆತನಿಂದ 1 ಕೆಜಿ 207 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ನಮೋ ಶಂಕರ್ ಲೇಔಟ್‌ನ 3ನೇ ಕ್ರಾಸ್‌ನಲ್ಲಿ ಕಪ್ಪು ಬಣ್ಣದ ಬ್ಯಾಗ್ ಹಿಡಿದು ಸಾರ್ವಜನಿಕರಿಗೆ ಅನುಮಾನಾಸ್ಪದ ರೀತಿಯಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿದೆ.

ಬಂಧಿತನನ್ನು ಅಬ್ಬು ಶಾಖಾದ್ರಿ ಜಹೀರುದ್ದೀನ್ (24) ಎಂದು ಗುರುತಿಸಲಾಗಿದ್ದು, ಆತ ಶಿವಮೊಗ್ಗ ನಗರದ ರಾಗಿಗುಡ್ಡ 4ನೇ ಕ್ರಾಸ್ ನಿವಾಸಿಯಾಗಿದ್ದು, ಹಮಾಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ ಪರಿಶೀಲಿಸಿದ ವೇಳೆ ಬಿಳಿ ಬಟ್ಟೆಯಲ್ಲಿ ಸುತ್ತಿ ಪ್ಯಾಕ್ ಮಾಡಲಾಗಿದ್ದ ಗಾಂಜಾ ಪತ್ತೆಯಾಗಿದೆ. ತೂಕ ಪರಿಶೀಲಿಸಿದಾಗ ಪ್ಯಾಕಿಂಗ್ ಸಮೇತ 1 ಕೆಜಿ 207 ಗ್ರಾಂ ಗಾಂಜಾ ಇದ್ದು, ಇದರ ಅಂದಾಜು ಮೌಲ್ಯ ₹65,000 ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

17 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

23 hours ago