Headlines

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

Screenshot 2026 07 10 21 07 53 851 com.picsart.studio edit

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits.

ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ ಪ್ರಕರಣದ ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿದರಗೋಡು ಗ್ರಾಮದ ನಿವಾಸಿ ರಾಜಪ್ಪ (36) ಶಿಕ್ಷೆಗೆ ಗುರಿಯಾದ ಆರೋಪಿ.

ಪ್ರಕರಣದ ವಿವರದಂತೆ, 2022ರ ಡಿಸೆಂಬರ್ 18ರಂದು ಅದೇ ಗ್ರಾಮದ ಪಾರ್ವತಮ್ಮ (50) ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ರಾಜಪ್ಪ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತನ್ನ ಕೃತ್ಯವನ್ನು ಬಹಿರಂಗಪಡಿಸುವ ಭೀತಿಯಿಂದ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಗ್ರಾಮದ ಬಾವಿಗೆ ಎಸೆದಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗಗೊಂಡಿತ್ತು.

ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮಾಳೂರು ವೃತ್ತದ ಇನ್ಸ್‌ಪೆಕ್ಟರ್ ಪ್ರವೀಣ್ ನೀಲಮ್ಮನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ವಿಚಾರಣೆ ವೇಳೆ ಸಾಕ್ಷ್ಯಾಧಾರಗಳು ದೃಢಪಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಯಶವಂತ್ ಕುಮಾರ್ ಆರೋಪಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.