w
Headlines
Home » ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು

Screenshot 2026 07 17 15 50 45 102 com.miui.gallery edit

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು

22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating.

ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ (ಔಟ್‌ಸೋರ್ಸಿಂಗ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಭುವನ್ ಸಿಂಗ್ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.