ಸಾಲದ ಬಾಧೆಗೆ ಬೇಸತ್ತು ಹೊಟೇಲ್ ಕೊಠಡಿಯಲ್ಲಿ ಕ್ರಷರ್ ಉದ್ಯಮಿ ಆತ್ಮ*ಹತ್ಯೆ | ಶಿವಮೊಗ್ಗ ಸುದ್ದಿ
A 42-year-old crusher entrepreneur from Shivamogga allegedly died by suicide in a hotel room after struggling with heavy debts and business losses. Police have registered a case and started an investigation.
ಶಿವಮೊಗ್ಗ: ಕಳೆದ ಐದು ವರ್ಷಗಳಿಂದ ತೀವ್ರ ಸಾಲದ ಸುಳಿಯಲ್ಲಿ ಸಿಲುಕಿದ್ದ ಕ್ರಷರ್ ಉದ್ಯಮಿಯೊಬ್ಬರು ನಗರದ ಖಾಸಗಿ ಹೊಟೇಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಶಿವಮೊಗ್ಗ ನಗರದ ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.
ಉದ್ಯಮದಲ್ಲಿ ಉಂಟಾದ ನಷ್ಟ ಹಾಗೂ ಹೆಚ್ಚುತ್ತಿರುವ ಸಾಲದ ಹೊರೆಯಿಂದ ಮಾನಸಿಕವಾಗಿ ನೊಂದಿದ್ದ ನವೀನ್ ಕುಮಾರ್ ಅವರು ನಗರದ ಖಾಸಗಿ ಹೊಟೇಲ್‌ವೊಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದು ಅಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…