Headlines

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

Screenshot 2026 07 10 21 38 27 170 com.picsart.studio edit

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation.

ಶಿವಮೊಗ್ಗ: ನಕಲಿ ಚಿನ್ನಾಭರಣಗಳನ್ನು ಅಸಲಿ ಚಿನ್ನವೆಂದು ನಂಬಿಸಿ ವಿವಿಧ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ಅಡಮಾನ ಇಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನೂ ಹಲವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಸುಮಾರು 300 ಗ್ರಾಂ ನಕಲಿ ಚಿನ್ನಾಭರಣಗಳನ್ನು 15ಕ್ಕೂ ಹೆಚ್ಚು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಡಮಾನ ಇಟ್ಟು, ₹30 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.

ಈ ಪ್ರಕರಣ ಮೊದಲು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ದಾಖಲಾಗಿತ್ತು. ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಸುಮಾರು ₹7.35 ಲಕ್ಷ ಸಾಲ ಪಡೆದು ವಂಚಿಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ದೊಡ್ಡಪೇಟೆ ಪೊಲೀಸರು, ಇದೇ ರೀತಿಯ ವಂಚನೆ ಹಲವು ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ನಡೆದಿರುವುದನ್ನು ಪತ್ತೆಹಚ್ಚಿದ್ದಾರೆ.

ತನಿಖೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್, ಶ್ರೀ ಸುವರ್ಣ ಸಹಕಾರ ಸಂಘ ಹಾಗೂ ತೀರ್ಥಹಳ್ಳಿಯ ಸುವರ್ಣ ವರ್ತಕರ ಸಂಘ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟಿರುವುದು ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕಿನ ಟಿಪ್ಪರ್ ಲಾರಿ ಚಾಲಕ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಈ ವಂಚನಾ ಜಾಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಸುಧಾ, ರಾಹುಲ್ ಸೇರಿದಂತೆ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಇನ್ನೂ ಹಲವು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಇದೇ ರೀತಿಯಲ್ಲಿ ವಂಚನೆ ನಡೆಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.