ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ
Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act.
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ.
ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಕೆಟಿಎಂ ಡ್ಯೂಕ್ ಬೈಕ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದುದನ್ನು ಪೊಲೀಸರು ಗಮನಿಸಿ ತಡೆದರು.
ಪರಿಶೀಲನೆ ವೇಳೆ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಅಪ್ರಾಪ್ತ ವಯಸ್ಕನಾಗಿರುವುದು ದೃಢಪಟ್ಟಿದೆ. ಇದರಿಂದ ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್ ಜಾರಿ ಮಾಡಲಾಯಿತು.
ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿರುವುದು ಕಾನೂನು ಉಲ್ಲಂಘನೆಯಾಗಿರುವುದರಿಂದ ವಾಹನದ ಮಾಲೀಕನಿಗೆ ₹25,000 ದಂಡ ವಿಧಿಸಿ ಆದೇಶಿಸಿದೆ.
ಪೊಲೀಸರು ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…