Categories: crime news

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized.

ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆನಂದಪುರ ಸಮೀಪದ ಸರಗುಂದ ಗ್ರಾಮದ ಸುಧನ್ (24) ಎಂದು ಗುರುತಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಆರೋಪಿ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರವನ್ನು ಕಡಿದು ಆರು ತುಂಡುಗಳಾಗಿ ಕತ್ತರಿಸಿ ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಕಳವೆಗೆ ಬಳಸಲಾಗಿದ್ದ ಓಮಿನಿ ವಾಹನ, ಮರ ಕತ್ತರಿಸಲು ಬಳಸಿದ ಮಿಷನ್ ಗರಗಸ ಹಾಗೂ ಸಾಗುವಾನಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚೋರಡಿ ವಲಯ ಅರಣ್ಯಾಧಿಕಾರಿ ಗೀತಾ ವಿಠಲ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಡಿಆರ್‌ಎಫ್‌ಒ ಚೇತನ್ ಕುಮಾರ್, ಅಶೋಕ್ ಹಾಗೂ ಬೀಟ್ ಫಾರೆಸ್ಟ್ ಅಧಿಕಾರಿಗಳಾದ ಪ್ರದೀಶ್, ಅಸ್ರಾರ್ ಖಾನ್, ಭೋಜಪ್ಪ ಮತ್ತು ಪ್ರವೀಣ್ ಅವರ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

7 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

7 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

7 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

9 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

13 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago