w
Headlines
Home » ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

Screenshot 2026 07 18 21 07 50 335 com.picsart.studio edit

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations.

ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ ಬಳಿಕ ಪತ್ತೆಯಾಗಿದೆ.

ಮೃತರನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಕೇಳೂರು ಗ್ರಾಮದ ನಿವಾಸಿ ರಾಮಪ್ಪ (62) ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ತೋಟದ ಕೆಲಸಕ್ಕೆ ತೆರಳಿದ್ದ ರಾಮಪ್ಪ ಅವರು, ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ದಾಟುವ ವೇಳೆ ಆಕಸ್ಮಿಕವಾಗಿ ಜಾರಿಬಿದ್ದು ನೀರಿನ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಘಟನೆ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ದೊರೆತಿರಲಿಲ್ಲ.

ಸುಮಾರು 15 ದಿನಗಳ ನಿರಂತರ ಶೋಧ ಕಾರ್ಯದ ಬಳಿಕ, ಹೊಳೆಯಲ್ಲಿ ರಾಮಪ್ಪ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಘಟನೆಯಿಂದ ಕೇಳೂರು ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.