ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು!

ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು!

Burglars broke into Unilet Appliances Store on BH Road in Shivamogga and stole 40 mobile phones worth ₹31.95 lakh, including 20 iPhones. Police have registered a case and launched an investigation.

​ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಬಿ.ಹೆಚ್. ರಸ್ತೆಯ ಯುನಿಲೆಟ್ ಅಪ್ಲೈಯನ್ಸಸ್ ಮಳಿಗೆಗೆ ನುಗ್ಗಿರುವ ದುಷ್ಕರ್ಮಿಗಳು, ಬರೋಬ್ಬರಿ ₹31.95 ಲಕ್ಷ ಮೌಲ್ಯದ ಹೊಸ ಮೊಬೈಲ್ ಫೋನ್‌ಗಳನ್ನು ದೋಚಿರುವ ಬೃಹತ್ ಕಳ್ಳತನ ಪ್ರಕರಣವೊಂದು ವರದಿಯಾಗಿದೆ.

​ದೀಪಕ್ ಪೆಟ್ರೋಲ್ ಬಂಕ್ ಸಮೀಪವಿರುವ ಈ ಮಳಿಗೆಯ ಮುಂಭಾಗದ ಶಟರ್ ಬೀಗಗಳನ್ನು ಒಡೆದು ಒಳನುಗ್ಗಿರುವ ಕಳ್ಳರು ಈ ಕೃತ್ಯವೆಸಗಿದ್ದಾರೆ. ಜುಲೈ 21ರಂದು ರಾತ್ರಿ ಈ ಘಟನೆ ನಡೆದಿದ್ದು, ಮರುದಿನ ಬೆಳಿಗ್ಗೆ ಮಳಿಗೆಯ ಮ್ಯಾನೇಜರ್ ಕುಶಾಲ್ ಶೆಟರ್ ಅವರು ಬಾಗಿಲು ತೆರೆಯಲು ಬಂದಾಗಲೇ ಕಳ್ಳತನವಾಗಿರುವುದು ಬಹಿರಂಗವಾಗಿದೆ. ಒಳಗೆ ಪರಿಶೀಲಿಸಿದಾಗ, ರ್ಯಾಕ್‌ನಲ್ಲಿದ್ದ ದುಬಾರಿ ಫೋನ್‌ಗಳು ನಾಪತ್ತೆಯಾಗಿದ್ದವು. ಚಾಲಾಕಿ ಕಳ್ಳರು ಕೇವಲ ಮೊಬೈಲ್‌ಗಳನ್ನು ಮಾತ್ರ ಕದ್ದೊಯ್ದಿದ್ದು, ಅವುಗಳ ಖಾಲಿ ಬಾಕ್ಸ್‌ಗಳನ್ನು ಅಂಗಡಿಯಲ್ಲೇ ಬಿಟ್ಟು ಜಾಗ ಖಾಲಿ ಮಾಡಿದ್ದಾರೆ.

ಕಳುವಾದ ಫೋನ್‌ಗಳ ವಿವರ:

ದೋಚಲಾದ ಒಟ್ಟು 40 ಮೊಬೈಲ್‌ಗಳಲ್ಲಿ 20 ಐಫೋನ್‌ಗಳು (ಮೌಲ್ಯ ₹20,28,900) ಹಾಗೂ 12 ಒಪ್ಪೋ (OPPO) ಬ್ರಾಂಡ್‌ನ ಫೋನ್‌ಗಳು (ಮೌಲ್ಯ ₹7,72,980) ಸೇರಿವೆ. ಒಟ್ಟಾರೆ ₹31,95,946 ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

​ಈ ಕುರಿತು ಜುಲೈ 22ರಂದು ರಾತ್ರಿ ಕೋಟೆ ಪೊಲೀಸ್ ಠಾಣೆಯಲ್ಲಿ ನೂತನ ಕಾನೂನು ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 331(4) ಮತ್ತು 305ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago