w
Headlines
Home » ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

Screenshot 2026 07 22 17 23 37 270 com.picsart.studio edit

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety.

ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಲೀಕರಿಗೆ ಸೂಚನೆ ನೀಡಲಾಯಿತು. ಅಲ್ಲದೆ, ಕರ್ನಾಟಕ ಪಬ್ಲಿಕ್ ಸೇಫ್ಟಿ ಆಕ್ಟ್ ಅನ್ವಯ ಜಿಮ್ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ನೋಟಿಸ್ ಜಾರಿ ಮಾಡಲಾಯಿತು.

ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಜಿಮ್‌ಗೆ ಬರುವ ಸಾರ್ವಜನಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಂತೆ ಪೊಲೀಸರು ತಿಳಿಸಿದರು.

ಈ ವೇಳೆ ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸಂತೋಷ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.