Categories: crime news

ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು |ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ಹಣ ಮಾಯ

ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು

ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹1.45 ಲಕ್ಷ ಮಾಯ

A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is underway.

ಶಿವಮೊಗ್ಗ, ಜುಲೈ 5: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು ₹1.60 ಲಕ್ಷ ಮೌಲ್ಯದ ಚಿನ್ನದ ಸರ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾನಗರ ನಿವಾಸಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ 65 ವರ್ಷದ ಯಲ್ಲಮ್ಮ ಅವರು ಚಿನ್ನದ ಸರ ಕಳೆದುಕೊಂಡಿರುವ ಮಹಿಳೆ. ಇವರು ಹೊಳೆ ಬಸ್ ನಿಲ್ದಾಣದ ಸಮೀಪದ ಮಂಜುಶ್ರೀ ದಂತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಜೂನ್ 27ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ ಬಳಿಕ, ಮನೆಗೆ ಬಂದಿದ್ದ ಸಂಬಂಧಿಯೊಬ್ಬರು ಯಲ್ಲಮ್ಮ ಅವರ ಕುತ್ತಿಗೆಯಲ್ಲಿ ಸರ ಇಲ್ಲದಿರುವುದನ್ನು ಗಮನಿಸಿದ್ದಾರೆ. ಆಗ ಕುತ್ತಿಗೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಸರ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ಘಟನೆ ತಿಳಿದ ಬಳಿಕ ಯಲ್ಲಮ್ಮ ಅವರು ತಾವು ಸಂಚರಿಸಿದ್ದ ಮಾರ್ಗ ಹಾಗೂ ಆಸ್ಪತ್ರೆ ಸುತ್ತಮುತ್ತ ವ್ಯಾಪಕವಾಗಿ ಹುಡುಕಾಟ ನಡೆಸಿದರೂ ಚಿನ್ನದ ಸರ ಪತ್ತೆಯಾಗಿಲ್ಲ. ತಮ್ಮ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಅವರು ದೂರು ನೀಡಿದ್ದಾರೆ.

ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹1.45 ಲಕ್ಷ ಮಾಯ

ಭದ್ರಾವತಿ: ಆನ್‌ಲೈನ್ ಶಾಪಿಂಗ್ ಆಪ್ ಮೀಶೋದ ಕಸ್ಟಮರ್ ಕೇರ್ ಹೆಸರಿನಲ್ಲಿ ಬಂದ ಕರೆಯನ್ನು ನಂಬಿ OTP ಹಂಚಿಕೊಂಡ ವೃದ್ಧರೊಬ್ಬರು ₹1.45 ಲಕ್ಷ ಕಳೆದುಕೊಂಡಿದ್ದಾರೆ.

ಸೀಗೇಬಾಗಿಯ ನಿವಾಸಿಯೊಬ್ಬರು  ವಂಚನೆಗೊಳಗಾದವರು. ಇವರು ಮೀಶೋ ಆಪ್ ಮೂಲಕ ₹138 ಮೌಲ್ಯದ ಜಪಾನಿ ಜೆಲ್ ಆಯಿಲ್ ಬುಕ್ ಮಾಡಿದ್ದರು. ಜೂನ್ 6ರಂದು ಬಂದಿದ್ದ ಉತ್ಪನ್ನ ಸರಿಯಿಲ್ಲದ ಕಾರಣ ಅದನ್ನು ವಾಪಸ್ ಮಾಡಲು ಯತ್ನಿಸಿದಾಗ, ಹಣ ಮರುಪಾವತಿಯಾಗುವುದಿಲ್ಲ ಎಂಬ ಸಂದೇಶ ಬಂದಿತ್ತು.

ಗೂಗಲ್‌ನಲ್ಲಿ ಸಿಕ್ಕ ಮೀಶೋ ಗ್ರಾಹಕ ಸೇವಾ ಕೇಂದ್ರದ ಸಂಖ್ಯೆಗೆ ಭಾಷಾ ಕರೆ ಮಾಡಿದ್ದರು. ಅಂದೇ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ತಾನು ಮೀಶೋ ಕಂಪನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದ. ಹಣ ಮರುಪಾವತಿ ಮಾಡುವುದಾಗಿ ಹೇಳಿ ಮೊಬೈಲ್‌ಗೆ ಬಂದ ಎರಡು ಒಟಿಪಿ ಸಂಖ್ಯೆಗಳನ್ನು ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಮರುದಿನ ಬೆಳಿಗ್ಗೆ ಭಾಷಾ ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದಾಗ, ಎಸ್‌ಬಿಐ ಖಾತೆಯಿಂದ ₹99,000 ಹಾಗೂ ಬ್ಯಾಂಕ್ ಆಫ್ ಬರೋಡಾ ಖಾತೆಯಿಂದ ₹46,000 ಸೇರಿದಂತೆ ಒಟ್ಟು ₹1,45,000 ಆನ್‌ಲೈನ್ ಮೂಲಕ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

7 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

7 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

7 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

9 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

13 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago