17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family.

ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ (ಕೆಪಿಎಲ್) ಗೆದ್ದಿರುವ ಶಿವಮೊಗ್ಗ ಯೋಧಾಸ್ ತಂಡಕ್ಕೆ ನವುಲೆಯ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ಅದ್ದೂರಿ ಅಭಿನಂದನಾ ಸಮಾರಂಭ ಆಯೋಜಿಸಲಾಯಿತು. ಜಿಲ್ಲೆಯ ನೂರಾರು ಕ್ರಿಕೆಟ್ ಅಭಿಮಾನಿಗಳ ಸಮ್ಮುಖದಲ್ಲಿ ಆಟಗಾರರನ್ನು ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್. ಅರುಣ್, ಜಿಲ್ಲೆಯ ಕ್ರಿಕೆಟ್ ಅಭಿಮಾನಿಗಳ ಬಹುಕಾಲದ ಕನಸು ಈಡೇರಿದ್ದು, ಶಿವಮೊಗ್ಗ ಯೋಧಾಸ್ ತಂಡದ ಸಿಇಓ ಮಿಥುನ್ ಹಾಗೂ ಆಟಗಾರರ ಪರಿಶ್ರಮವೇ ಈ ಐತಿಹಾಸಿಕ ಸಾಧನೆಗೆ ಕಾರಣವಾಗಿದೆ ಎಂದು ಹೇಳಿದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದ ಬಲಿಷ್ಠ ತಂಡಗಳನ್ನು ಮಣಿಸಿ ಮಹಾರಾಜ ಟ್ರೋಫಿಯನ್ನು ಗೆದ್ದಿರುವುದು ಜಿಲ್ಲೆಯ ಹೆಮ್ಮೆ. ಈ ಸಾಧನೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಐದು ಬಲಿಷ್ಠ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿರುವ ಶಿವಮೊಗ್ಗ ಯೋಧಾಸ್ ತಂಡದ ಎಲ್ಲಾ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯನ್ನು ಮೈಸೂರು ಪೇಟ ತೊಡಿಸಿ ಗೌರವಿಸಲಾಯಿತು. ಈ ವೇಳೆ ಆಟಗಾರರು ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದರು.

ಸಮಾರಂಭದ ವಿಶೇಷ ಕ್ಷಣವಾಗಿ, ಮಹಾರಾಜ ಟ್ರೋಫಿ ಗೆಲುವಿನ ಬಹುಮಾನ ಮೊತ್ತವಾದ ₹15 ಲಕ್ಷದಲ್ಲಿ ₹5 ಲಕ್ಷವನ್ನು ರಣಜಿ ಪಂದ್ಯಗಳಲ್ಲಿ ಶಿವಮೊಗ್ಗವನ್ನು ಪ್ರತಿನಿಧಿಸಿದ್ದ ಹಾಗೂ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಕ್ರಿಕೆಟಿಗ ಅಕ್ಷಯ್ ಅವರ ಕುಟುಂಬಕ್ಕೆ ಶಿವಮೊಗ್ಗ ಯೋಧಾಸ್ ಸಿಇಓ ಮಿಥುನ್ ನೆರವಿನ ರೂಪದಲ್ಲಿ ನೀಡಿದರು. ಈ ನಡೆ ಕ್ರೀಡಾ ಕ್ಷೇತ್ರದಲ್ಲಿನ ಮಾನವೀಯತೆಗೆ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಕುಮಾರ್, ಕೆಎಸ್‌ಸಿಎ ಶಿವಮೊಗ್ಗ ವಲಯ ಅಧ್ಯಕ್ಷ ನಾಗೇಂದ್ರ ಪಂಡಿತ್, ಸದಾನಂದ್, ಸುಕುಮಾರ್, ಐಡಿಯಲ್ ಗೋಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ವಿಜೇತ ತಂಡದ ಮೆರವಣಿಗೆ ಆರಂಭವಾಗಿ ಬಿ.ಎಚ್. ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ ಮಾರ್ಗವಾಗಿ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣ ತಲುಪಿತು. ಮಾರ್ಗದುದ್ದಕ್ಕೂ ಅಭಿಮಾನಿಗಳು ಆಟಗಾರರಿಗೆ ಭರ್ಜರಿ ಸ್ವಾಗತ ಕೋರಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

6 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

6 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

6 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

18 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

19 hours ago