w
Headlines
Home » ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ

Screenshot 2026 07 15 16 00 19 452 com.openai.chatgpt edit

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ

Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026.

ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ನೇಮಕಗೊಂಡಿರುವ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುದಾನ ಸಹಿತವಾಗಿ ಅನುಮೋದನೆಗೊಂಡು ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿರುವ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಜುಲೈ 31, 2026ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.