ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್ಲೈನ್ನಲ್ಲಿ ಸಲ್ಲಿಸಲು ಸೂಚನೆ
Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026.
ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ನೇಮಕಗೊಂಡಿರುವ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುದಾನ ಸಹಿತವಾಗಿ ಅನುಮೋದನೆಗೊಂಡು ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿರುವ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಜುಲೈ 31, 2026ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್