w
Headlines
Home » ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

Screenshot 2026 07 06 21 53 51 702 photoeditor.layout.collagemaker edit

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026.

ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ ನಾಳೆ (ಜುಲೈ 7, 2026, ಮಂಗಳವಾರ) ರಜೆ ಘೋಷಿಸಲಾಗಿದೆ.

ತಹಸೀಲ್ದಾರ್ ರಂಜಿತ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾರಿ ಮಳೆಯ ಪರಿಣಾಮ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿರುವ ತಹಸೀಲ್ದಾರ್, ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಿಂದ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.