Headlines

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries.

​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

​ಈ ಕಾರು ಉಡುಪಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದು, ಇದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂವರು ಪ್ರಯಾಣಿಸುತ್ತಿದ್ದರು. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಮಳೆಯಾಗುತ್ತಿರುವುದರಿಂದ ರಸ್ತೆಯ ಮೇಲೆ ನೀರು ಹರಿಯುತ್ತಿತ್ತು, ಜೊತೆಗೆ ರಸ್ತೆಯ ತುಂಬಾ ಮಣ್ಣು ಕೂಡ ಶೇಖರಣೆಯಾಗಿತ್ತು.

​ರಸ್ತೆಯ ಈ ಸ್ಥಿತಿಯ ನಡುವೆಯೂ ಕಾರು ವೇಗವಾಗಿ ಬಂದಿದ್ದರಿಂದ, ಮಣ್ಣು ಮತ್ತು ನೀರಿನ ಜಾರುವಿಕೆಗೆ ಸಿಲುಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಕಾರು ಸಂಪೂರ್ಣವಾಗಿ ಪಲ್ಟಿಯಾದರೂ, ಒಳಗಿದ್ದ ಯಾರಿಗೂ ಗಾಯಗಳಾಗಿಲ್ಲ. ಸದ್ಯ ಕಾರಿನಲ್ಲಿದ್ದ ಇಬ್ಬರು ಮಹಿಳೆಯರನ್ನು ಸುರಕ್ಷಿತವಾಗಿ ಬಸ್ ಮೂಲಕ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ.

​ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಪ್ರದೇಶಗಳು ಹಾಗೂ ಘಾಟಿ ರಸ್ತೆಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಮತ್ತು ನಿಧಾನವಾಗಿ ಚಲಿಸುವಂತೆ ಸೂಚಿಸಲಾಗಿದೆ.

About The Author

Exit mobile version