ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು
Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident.
ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29) ಆತ್ಮ*ಹತ್ಯೆ ಮಾಡಿಕೊಂಡಿರುವ ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ರಾಕೇಶ್ ಮೂಲತಃ ತೀರ್ಥಹಳ್ಳಿಯವರಾಗಿದ್ದು, ಉಡುಪಿಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ನೃತ್ಯ ಪ್ರತಿಭೆ ಮತ್ತು ತರಬೇತಿಯ ಮೂಲಕ ಅನೇಕ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕಳೆದ ಮೂರು–ನಾಲ್ಕು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆಯುವ ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಲಾಭಿಮಾನಿಗಳಲ್ಲಿ ಶೋಕ ಆವರಿಸಿದೆ.
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…