Headlines

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident.

ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29) ಆತ್ಮ*ಹತ್ಯೆ ಮಾಡಿಕೊಂಡಿರುವ ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ರಾಕೇಶ್ ಮೂಲತಃ ತೀರ್ಥಹಳ್ಳಿಯವರಾಗಿದ್ದು, ಉಡುಪಿಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ನೃತ್ಯ ಪ್ರತಿಭೆ ಮತ್ತು ತರಬೇತಿಯ ಮೂಲಕ ಅನೇಕ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕಳೆದ ಮೂರು–ನಾಲ್ಕು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆಯುವ ದಸರಾ‌ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಲಾಭಿಮಾನಿಗಳಲ್ಲಿ ಶೋಕ ಆವರಿಸಿದೆ.

ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author