ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies.

ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟಿರುವುದು ದುಃಖದ ಸಂಗತಿಯಾಗಿದೆ.

ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಖಾವಳ್ಳಿ ಗ್ರಾಮದ ಸುಮಾ (27) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡದ ನಿರಂತರ ಚಿಕಿತ್ಸೆಯ ನಡುವೆಯೂ ಅವರು ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣವು ಕಳೆದ ಕೆಲವು ದಿನಗಳಿಂದ ತೀರ್ಥಹಳ್ಳಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಸುಮಾ ಅವರ ಆರೋಗ್ಯ ಗಂಭೀರಗೊಂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಇದೇ ವೇಳೆ ಜನಿಸಿದ ನವಜಾತ ಶಿಶುವಿನ ಆರೋಗ್ಯವೂ ತೀವ್ರ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಘಟನೆಗೆ ಸಂಬಂಧಿಸಿ ಬುಧವಾರ ಆಸ್ಪತ್ರೆ ಎದುರು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿ ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದರು. ಬಳಿಕ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ವೆಚ್ಚವನ್ನು ಭರಿಸುವ ಭರವಸೆ ನೀಡಿದ್ದರು.

ಆದರೆ ಎಲ್ಲಾ ಪ್ರಯತ್ನಗಳ ನಡುವೆಯೂ ಸುಮಾ ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ. ಅವರ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ವೈದ್ಯರ ನಿರ್ಲಕ್ಷ್ಯದ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago