ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ
Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation.
ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ ಕೋಡೂರಿನ ಶಾಖವಳ್ಳಿ ಗ್ರಾಮದ ಸುಮಾ ರವರ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಸಾಂತ್ವಾನ ಹೇಳಿದರು.
ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸುಮಾ (27) ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಶಸ್ತ್ರಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ತೀವ್ರ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುಮಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡದ ನಿರಂತರ ಚಿಕಿತ್ಸೆಯ ನಡುವೆಯೂ ಶಸ್ತ್ರಚಿಕಿತ್ಸೆ ವೇಳೆ ಉಂಟಾದ ತೀವ್ರ ರಕ್ತಸ್ರಾವದಿಂದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದೀಗ ಸುಮಾ ಅವರ ನಿಧನದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ಶಾಖವಳ್ಳಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ವೈಯಕ್ತಿಕವಾಗಿ ಧನಸಹಾಯ ನೀಡಿ, ಸರ್ಕಾರದ ವತಿಯಿಂದಲೂ ಅಗತ್ಯ ನೆರವು ದೊರಕಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…