Categories: crime news

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ

A 26-year-old youth died and another sustained serious injuries after a dry tree branch fell on their moving motorcycle near Sunnadabasti, Garthikere, in Shivamogga district. Ripponpet Police have registered a case and are investigating.

ರಿಪ್ಪನ್‌ಪೇಟೆ, ಜುಲೈ 4: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಒಣ ಮರದ ರೆಂಬೆ ಬಿದ್ದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಚೋರಡಿ ಗ್ರಾಮದ ಮೂಲದ ಸಂತೋಷ್ (26), ತಂದೆ ಬೊಮ್ಮಣ್ಣ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವೀರಭದ್ರ, ತಂದೆ ರಾಮಪ್ಪ, ಚೋರಡಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನು ಹಿಡಿಯಲು ಅಗತ್ಯವಾದ ಉಕ್ಕಡವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಚೋರಡಿಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತಾರಿಗ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸುಮಾರು 50 ಅಡಿ ಎತ್ತರದಲ್ಲಿದ್ದ ಒಣ ಮರದ ರೆಂಬೆ ಏಕಾಏಕಿ ಬೈಕ್ ಮೇಲೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರೆಂಬೆ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ಮೃತ ಸಂತೋಷ್ ಅವರ ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

10 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

11 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

11 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

12 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

16 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago