POSTMANNEWS

ನೈಜ ಸುದ್ದಿ ನೇರ ಬಿತ್ತರ..

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Screenshot 2026 07 07 21 11 57 335 photoeditor.layout.collagemaker edit

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert.

ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ತುಂಗಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಜಲಾಶಯ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಂಗಳವಾರ ಬೆಳಗಿನ ವೇಳೆಗೆ ತುಂಗಾ ಜಲಾಶಯಕ್ಕೆ 21,508 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದ್ದು, 19,078 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿತ್ತು.

ಆದರೆ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಧ್ಯಾಹ್ನ 3:30ರ ವೇಳೆಗೆ ಒಳಹರಿವಿನ ಪ್ರಮಾಣ 46,385 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದಕ್ಕೆ ಅನುಗುಣವಾಗಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ತೆರೆದು ಒಟ್ಟು 46,385 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ 43,305 ಕ್ಯೂಸೆಕ್ ನೀರನ್ನು ನೇರವಾಗಿ ತುಂಗಾ ನದಿಗೆ ಹರಿಸಲಾಗುತ್ತಿದೆ.

ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಪಾತ್ರದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.