ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ
Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert.
ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ತುಂಗಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಜಲಾಶಯದ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದ್ದು, 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಜಲಾಶಯ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಂಗಳವಾರ ಬೆಳಗಿನ ವೇಳೆಗೆ ತುಂಗಾ ಜಲಾಶಯಕ್ಕೆ 21,508 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದ್ದು, 19,078 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿತ್ತು.
ಆದರೆ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಧ್ಯಾಹ್ನ 3:30ರ ವೇಳೆಗೆ ಒಳಹರಿವಿನ ಪ್ರಮಾಣ 46,385 ಕ್ಯೂಸೆಕ್ಗೆ ಏರಿಕೆಯಾಗಿದೆ. ಇದಕ್ಕೆ ಅನುಗುಣವಾಗಿ ಜಲಾಶಯದ ಎಲ್ಲಾ ಗೇಟ್ಗಳನ್ನು ತೆರೆದು ಒಟ್ಟು 46,385 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ 43,305 ಕ್ಯೂಸೆಕ್ ನೀರನ್ನು ನೇರವಾಗಿ ತುಂಗಾ ನದಿಗೆ ಹರಿಸಲಾಗುತ್ತಿದೆ.
ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಪಾತ್ರದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್