HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children.
ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ವಾಮಾಚಾರ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮಸ್ಥರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಲ್ಲಿಸಿರುವ ಮನವಿಯ ಪ್ರಕಾರ, ಶೇಖರಪ್ಪ ಬಿನ್ ಶಂಕ್ರಪ್ಪ ಹಾಗೂ ಶೇಖರ ಶೆಟ್ಟಿ ಬಿನ್ ಗಣಪಯ್ಯ ಶೆಟ್ಟಿ ಅವರ ಮನೆಗಳಿಗೆ ತೆರಳುವ ರಸ್ತೆಯ ಪಕ್ಕದಲ್ಲಿ ಗುರುತಿಸಲಾಗದ ವ್ಯಕ್ತಿಗಳು ವಾಮಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ.
ಜುಲೈ 15ರಂದು ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಈ ದೃಶ್ಯವನ್ನು ಕಂಡು ಭಯಗೊಂಡು ಅಸ್ವಸ್ಥರಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ರಸ್ತೆಯನ್ನು ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪ್ರತಿದಿನ ಬಳಸುತ್ತಿರುವುದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಮಾಚಾರ ನಡೆಸಿದವರನ್ನು ಪತ್ತೆಹಚ್ಚಿ, ಅಗತ್ಯ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ರಕ್ಷಣೆ ಒದಗಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…