Headlines

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

Screenshot 2026 08 20 14 21 08 018 com.picsart.studio edit

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

Bhadravati New Town Police have arrested a bike theft accused who had been absconding for 13 years in connection with a 2010 theft case.

ಶಿವಮೊಗ್ಗ: ಕಳೆದ 13 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. 2010ರಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ ಎನ್ನಲಾಗಿದ್ದು, ಪ್ರಕರಣದ ವಿಚಾರಣೆಗೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈತನ ವಿರುದ್ಧ ಭದ್ರಾವತಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ವಾರಂಟ್ ಆಧರಿಸಿ ಭದ್ರಾವತಿ ನ್ಯೂ ಟೌನ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಮಂಜುನಾಥ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.