ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್
Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme.
ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಕೃಷಿ ಅಧ್ಯಯನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ PSI ಶಿವನಗೌಡ ಪಾಟೀಲ್ ಅವರು, ಮಕ್ಕಳೊಂದಿಗೆ ಕೆಸರು ಗದ್ದೆಗೆ ಇಳಿದು ಹೂಟಿ ಹಾಗೂ ನಾಟಿ ಕಾರ್ಯದ ಪ್ರಾತ್ಯಕ್ಷಿಕೆ ನೀಡಿದರು.
ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ಕೃಷಿಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಪ್ರತಿವರ್ಷ ಗದ್ದೆ ನಾಟಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಶಾಲೆಯ ಸಮೀಪದ ಭತ್ತದ ಗದ್ದೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ನಾಟಿ ಕಾರ್ಯದಲ್ಲಿ ಪಾಲ್ಗೊಂಡರು.
ಈ ವೇಳೆ ಪೊಲೀಸ್ ಅಧಿಕಾರಿ ಶಿವನಗೌಡ ಪಾಟೀಲ್ ಅವರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿ, ಕೃಷಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಪೊಲೀಸ್ ಅಧಿಕಾರಿಯ ಸರಳತೆ ಹಾಗೂ ಮಕ್ಕಳೊಂದಿಗೆ ಬೆರೆತು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿದ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಪ್ರಾಯೋಗಿಕ ಅನುಭವ ನೀಡುತ್ತಿರುವ ಶಾಲೆಯ ಶಿಕ್ಷಕರ ಪ್ರಯತ್ನಕ್ಕೂ ಶ್ಲಾಘನೆ ವ್ಯಕ್ತವಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…