ಆಗುಂಬೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ಕಾರು: ಸ್ಥಳೀಯ ಯುವಕರ ಸಮಯಪ್ರಜ್ಞೆಯಿಂದ ಕುಟುಂಬ ರಕ್ಷಣೆ
Tourists from Honnavar travelling to Sringeri were rescued after their car got stuck in floodwater near Agumbe. Local youths acted swiftly to save the family and prevent a major mishap.
ಆಗುಂಬೆ, ಆ.1: ಆಗುಂಬೆ ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆ ಮೇಲೆ ನೀರು ನಿಂತ ಪರಿಣಾಮ ಹೊನ್ನಾವರ ಮೂಲದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಸ್ಥಳೀಯ ಯುವಕರ ಸಮಯೋಚಿತ ಕಾರ್ಯಾಚರಣೆಯಿಂದ ಕಾರಿನಲ್ಲಿದ್ದ ಕುಟುಂಬದ ಎಲ್ಲ ಸದಸ್ಯರು ಸುರಕ್ಷಿತವಾಗಿ ರಕ್ಷಿಸಲ್ಪಟ್ಟಿದ್ದಾರೆ.
ಹೊನ್ನಾವರದಿಂದ ಕಾರಿನಲ್ಲಿ ಆಗುಂಬೆ ಮಾರ್ಗವಾಗಿ ಶೃಂಗೇರಿಗೆ ತೆರಳುತ್ತಿದ್ದ ಕುಟುಂಬ ನಬಾಳ ಸಮೀಪ ತಲುಪಿದ ವೇಳೆ ರಸ್ತೆ ಮೇಲೆ ಮೊಣಕಾಲಿನಷ್ಟು ನೀರು ನಿಂತಿತ್ತು. ನೀರಿನ ಆಳದ ಅಂದಾಜು ಸಿಗದೇ ಸ್ವಿಫ್ಟ್ ಕಾರನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ವಾಹನ ಮಣ್ಣಿನಲ್ಲಿ ಸಿಲುಕಿಕೊಂಡು ಸ್ಥಗಿತಗೊಂಡಿತು.
ಕಾರು ನೀರಿನಲ್ಲಿ ಸಿಲುಕಿರುವುದನ್ನು ಗಮನಿಸಿದ ಸ್ಥಳೀಯ ಯುವಕರು ತಕ್ಷಣ ಸ್ಥಳಕ್ಕೆ ಧಾವಿಸಿ ಹಗ್ಗದ ಸಹಾಯದಿಂದ ವಾಹನವನ್ನು ಹೊರತೆಗೆದರು. ನೀರಿನ ಹರಿವು ಹೆಚ್ಚಿದ್ದರಿಂದ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಕೆಲಕಾಲ ಆತಂಕಕ್ಕೊಳಗಾಗಿದ್ದರು.
ಸ್ಥಳೀಯರಾದ ಪ್ರವೀಣ್ ಬೆಳ್ಳೂರು, ಉಮೇಶ್ ಹೊಸ್ಕೇರಿ ಹಾಗೂ ಮಂಜುನಾಥ್ ರೈಸ್ ಮಿಲ್ ಅವರ ತ್ವರಿತ ಸ್ಪಂದನೆ ಮತ್ತು ಧೈರ್ಯದಿಂದ ಕುಟುಂಬದ ಎಲ್ಲ ಸದಸ್ಯರನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು. ಅವರ ಸಮಯಪ್ರಜ್ಞೆಯ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…