ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ
Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region.
ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ರೈತರೊಂದಿಗೆ ಸೇರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದರು. ರೈತರ ಹಿತಾಸಕ್ತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಮಹತ್ವವನ್ನು ಅವರು ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಬಿ ವೈ ರಾಘವೇಂದ್ರ , ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಕೆ.ಎಸ್. ಗುರುಮೂರ್ತಿ, ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೇಗೊಂದಿ, ಎಸ್.ಬಿ. ಮಠದ್, ಶೇಖರಪ್ಪ ಅಂಬಾರ್ಕಪ್ಪರ್, ರುದ್ರಮೂರ್ತಿ ಸಾಲೂರು, ರುದ್ರಮುನಿ ಚುರ್ಚಿಗುಂಡಿ, ಚೆನ್ನವೀರಪ್ಪ ಹಾಗೂ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹುಲ್ಮಾರ್ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…