w
Headlines
Home » ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Screenshot 2026 08 29 18 03 43 258 com.openai.chatgpt edit

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries.

ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 48 ಮಂದಿ ಪ್ರಯಾಣಿಸುತ್ತಿದ್ದರು.

ವಿದ್ಯಾರ್ಥಿಗಳು ಸಾಗರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಆನಂದಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಾಸ್ಪಾಡಿ ಕೆರೆಯ ಸಮೀಪ ಬಸ್‌ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಕೆರೆಯ ತಡೆಗೋಡೆಗೆ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಹಾನಿಯಾಗಿದ್ದು, ಬಸ್‌ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ರವಿಶಂಕರ್ ಹಾಗೂ ಉಪನ್ಯಾಸಕರಾದ ಭಾಸ್ಕರ್, ಜಗನ್ನಾಥ್, ಉಮೇಶ್ ಮತ್ತು ಬಿ.ಡಿ. ರವಿಕುಮಾರ್ ಸೇರಿದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.