ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ
Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries.
ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 48 ಮಂದಿ ಪ್ರಯಾಣಿಸುತ್ತಿದ್ದರು.
ವಿದ್ಯಾರ್ಥಿಗಳು ಸಾಗರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಆನಂದಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಕಾಸ್ಪಾಡಿ ಕೆರೆಯ ಸಮೀಪ ಬಸ್ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಕೆರೆಯ ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಹಾನಿಯಾಗಿದ್ದು, ಬಸ್‌ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ತಕ್ಷಣ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ರವಿಶಂಕರ್ ಹಾಗೂ ಉಪನ್ಯಾಸಕರಾದ ಭಾಸ್ಕರ್, ಜಗನ್ನಾಥ್, ಉಮೇಶ್ ಮತ್ತು ಬಿ.ಡಿ. ರವಿಕುಮಾರ್ ಸೇರಿದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…