w
Headlines
Home » ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

Screenshot 2026 08 13 14 06 39 103 com.picsart.studio edit

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

A truck carrying coke from Mangaluru to Ballari rolled into a 20-foot-deep ditch near Arasalu Kere close to Ripponpete after the driver tried to avoid a two-wheeler. No casualties were reported.

ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ಇಂದು ಮಧ್ಯಾಹ್ನ ರಿಪ್ಪನ್ ಪೇಟೆ ಸಮೀಪದ ಅರಸಾಳು ಕೆರೆ ಏರಿ ಬಳಿ ನಡೆದಿದೆ.

ಮಂಗಳೂರಿನಿಂದ ಬಳ್ಳಾರಿಗೆ ಕೋಕ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎದುರಿನಿಂದ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ವೇಳೆ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ ಎನ್ನಲಾಗಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿ ಕಂದಕಕ್ಕೆ ಉರುಳುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಲಾರಿ ಚಾಲಕನನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ.

ಅಪಘಾತದ ಪರಿಣಾಮ ಕೆಲಕಾಲ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.