Categories: Blog

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

Former Hosanagara MLA B. Swamirao criticizes the Karnataka Congress cabinet expansion, alleging injustice to women, Brahmins, and loyal senior legislators while favoring sons of former chief ministers.

ಹೊಸನಗರ, ಆ.4: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಹಿರಿಯ ಶಾಸಕರಿಗೆ ಅನ್ಯಾಯವಾಗಿದೆ ಎಂದು ಹೊಸನಗರ ಕ್ಷೇತ್ರದ ಮಾಜಿ ಶಾಸಕ ಬಿ. ಸ್ವಾಮಿರಾವ್ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಹೆಚ್ಚು ಸಮಯ ತೆಗೆದುಕೊಂಡಿದ್ದರೂ, ಅಂತಿಮವಾಗಿ ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದ ನಾಯಕರನ್ನು ಕಡೆಗಣಿಸಿ, ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಟೀಕಿಸಿದರು.

ಪಕ್ಷದ ಹೈಕಮಾಂಡ್ ರಾಜ್ಯ ರಾಜಕಾರಣದಲ್ಲಿ ಪದೇಪದೇ ಹಸ್ತಕ್ಷೇಪ ಮಾಡುತ್ತಿರುವುದು ಸಂವಿಧಾನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಧಕ್ಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವೈ.ಕೆ. ಗೋಪಾಲಕೃಷ್ಣ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಪುತ್ರ ದಿನೇಶ್ ಗುಂಡೂರಾವ್, ಮೈಸೂರಿನ ತನ್ವೀರ್ ಸೇಠ್, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಸೇರಿದಂತೆ ಹಲವು ಹಿರಿಯ ಹಾಗೂ ಪ್ರಾಮಾಣಿಕ ನಾಯಕರಿಗೆ ಸಚಿವ ಸ್ಥಾನ ದೊರೆಯದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಸಚಿವರಿಲ್ಲದ ಸಚಿವ ಸಂಪುಟ ರಚನೆಯಾಗಿರುವುದು ಕಾಂಗ್ರೆಸ್ ಮಹಿಳೆಯರನ್ನು ಕಡೆಗಣಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕೆಲವರಿಗೆ ಸಚಿವ ಸ್ಥಾನ ನೀಡಿರುವುದನ್ನು ಜನರು ಪ್ರಶ್ನಿಸುತ್ತಿದ್ದಾರೆ. ಹಲವು ಬಾರಿ ಗೆದ್ದ ಯುವ ಶಾಸಕರನ್ನೂ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಚಿವ ಸಂಪುಟದಿಂದ ದೂರವಿಡಲಾಗಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಪ್ರದೇಶವಾರು, ಜಾತಿವಾರು ಹಾಗೂ ಅಭಿವೃದ್ಧಿ ಆಧಾರಿತ ಸಮತೋಲನಕ್ಕೆ ಆದ್ಯತೆ ನೀಡಿದರೆ ಮಾತ್ರ ಡಿಕೆಶಿ ನೇತೃತ್ವದ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ ಎಂದು ಬಿ. ಸ್ವಾಮಿರಾವ್ ಅಭಿಪ್ರಾಯಪಟ್ಟರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago