ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

Forest department plantation watcher K.N. Ramu was seriously injured after a bear attack while on duty in Shidiginahalu village of Shikaripura taluk, Shivamogga district. Senior forest officials visited him at the hospital and provided support.

ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಮೇಲೆ ಕರಡಿ ಆಕಸ್ಮಿಕವಾಗಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ.

ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎನ್. ರಾಮು ಅವರು ಶಿಡಿಗಿನಾಳು ಭಾಗದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ದಿಢೀರನೆ ದಾಳಿ ಮಾಡಿದ ಕರಡಿಯಿಂದ ರಾಮು ಅವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ್ ವಿ.ಎಸ್. ಹಾಗೂ ವಲಯ ಅರಣ್ಯಾಧಿಕಾರಿ ಪರಶುರಾಮ ಎಲ್. ಅವರು ರಾಮು ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ನಂತರ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಅಧಿಕಾರಿಗಳು, ಗಾಯಾಳುವಿಗೆ ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ನೆರವು ಹಾಗೂ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು. ಸಂಕಷ್ಟದಲ್ಲಿದ್ದ ಸಿಬ್ಬಂದಿಗೆ ತಕ್ಷಣದ ಆರ್ಥಿಕ ನೆರವನ್ನೂ ನೀಡುವ ಮೂಲಕ ಮಾನವೀಯ ಕಾಳಜಿ ತೋರಿದರು.

ಅರಣ್ಯ ಇಲಾಖೆಯ ಅಧಿಕಾರಿಗಳ ತಕ್ಷಣದ ಸ್ಪಂದನೆ ಹಾಗೂ ನೆರವಿಗೆ ಗಾಯಾಳು ರಾಮು ಅವರ ಕುಟುಂಬಸ್ಥರು ಮತ್ತು ಅರಣ್ಯ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

15 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

16 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

17 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago