w
Headlines
Home » ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

Screenshot 2026 08 03 14 12 00 418 com.picsart.studio edit

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

Sagar MLA Beluru Gopalakrishna expresses strong dissatisfaction after being denied a ministerial berth in the Karnataka Cabinet and announces he will resign as MLA on August 4.

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ನೂತನ 20 ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗತೊಡಗಿದೆ. ಈ ನಡುವೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮತ್ತು ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

“ನಾನು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗಾಗಿ ನಿರಂತರವಾಗಿ ದುಡಿದಿದ್ದರೂ ಸಚಿವ ಸ್ಥಾನ ನೀಡದೆ ನನಗೆ ಅನ್ಯಾಯ ಮಾಡಲಾಗಿದೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಿಗಿಂತ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 4) ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.

ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗೆ ಮತ್ತಷ್ಟು ರಾಜಕೀಯ ಚಟುವಟಿಕೆಗೆ ಕಾರಣವಾಗುವ ಸಾಧ್ಯತೆ ಇದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.