ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

Supporters of MLA Beluru Gopalakrishna staged a protest in Sagar after he was denied a ministerial berth, burning tyres and blocking the highway. Several Congress leaders have resigned from their party posts in protest.

ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಸಾಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು–ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸ್ಥಾನ ಸಿಗದಿರುವುದು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿ ಸಾಗರ ಹಾಗೂ ಹೊಸನಗರ ಭಾಗಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಕ್ಷದ ನಿರ್ಧಾರವನ್ನು ವಿರೋಧಿಸಿದರು.

ಇದರ ಬೆನ್ನಲ್ಲೇ ಹಲವು ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸನಗರ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾಗೋಡಿ ವಿಶ್ವನಾಥ್, ಸಾಗರ ಎನ್‌ಎಸ್‌ಯುಐ ಅಧ್ಯಕ್ಷ ಚಿನ್ಮಯ್ ಹಾಗೂ ತಾಲೂಕು ಎನ್‌ಎಸ್‌ಯುಐ ಅಧ್ಯಕ್ಷ ಕಿರಣ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಇನ್ನೂ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ತಾವೂ ಸಹ ಪಕ್ಷದ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಹಲವು ಮುಖಂಡರು ಘೋಷಿಸಿದ್ದಾರೆ. ಇದೇ ವೇಳೆ ಸಾಗರ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅವರು ಕೂಡ ಬೇಳೂರು ಗೋಪಾಲಕೃಷ್ಣ ಅವರಿಗೆ ಬೆಂಬಲ ಸೂಚಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಸಾಗರ ಕಾಂಗ್ರೆಸ್‌ನ ಇನ್ನಷ್ಟು ಮುಖಂಡರು ಸಹ ಪಕ್ಷದ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಸಚಿವ ಸಂಪುಟ ವಿಸ್ತರಣೆಯ ಬಳಿಕ ಜಿಲ್ಲೆಯ ಕಾಂಗ್ರೆಸ್ ರಾಜಕೀಯದಲ್ಲಿ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

11 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

11 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

12 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago