w
Headlines
Home » ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

Screenshot 2026 08 24 01 23 45 911 com.picsart.studio edit

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

A 9-foot-long python was safely rescued from behind a house in Chandragutti village of Soraba taluk by Forest Department officials and released into the forest.

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ಸುಮಾರು 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಚಂದ್ರಗುತ್ತಿ ಗ್ರಾಮದ ನಾರಾಯಣಪ್ಪ ಅವರ ಮನೆಯ ಹಿಂಭಾಗದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಮನೆಯ ನಿವಾಸಿ ಆದರ್ಶ ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಮಾಹಿತಿ ಪಡೆದ ಉಪ ವಲಯ ಅರಣ್ಯಾಧಿಕಾರಿ ಮೋಹನ್ ಹಾಗೂ ಗಸ್ತು ಅರಣ್ಯ ಪಾಲಕ ಮೌನೇಶ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಹೆಬ್ಬಾವಿಗೆ ಯಾವುದೇ ರೀತಿಯ ಹಾನಿಯಾಗದಂತೆ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಅದನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.

ಈ ಕಾರ್ಯಾಚರಣೆಯಲ್ಲಿ ಸ್ಥಳೀಯರಾದ ರಘು ಸ್ವಾದಿ ಹಾಗೂ ಆದರ್ಶ ಅವರು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೈಜೋಡಿಸಿ ಸಹಕರಿಸಿದರು. ಬಳಿಕ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.