POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

Screenshot 2026 08 21 19 57 00 746 com.picsart.studio edit

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

nursing students died and 20 others were injured after a private tourist bus carrying students overturned near Aymangala in Chitradurga district, Karnataka.

ಚಿತ್ರದುರ್ಗ: ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 20 ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡ ವಿದ್ಯಾರ್ಥಿಯೊಬ್ಬರ ಮಾಹಿತಿ ಪ್ರಕಾರ, ರಾತ್ರಿ ಸುಮಾರು 10.30ರ ವೇಳೆಗೆ ಬಸ್‌ನಲ್ಲಿದ್ದ ಬಹುತೇಕ ವಿದ್ಯಾರ್ಥಿಗಳು ನಿದ್ರೆಗೆ ಜಾರಿದ್ದರು. ಈ ವೇಳೆ ಏಕಾಏಕಿ ಬಸ್ ಅಪಘಾತಕ್ಕೀಡಾಗಿದ್ದು, ವಿದ್ಯಾರ್ಥಿಗಳು ಆತಂಕದಿಂದ ಕೂಗಿಕೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬಸ್‌ನ ಕಿಟಕಿಗಳನ್ನು ಒಡೆದು, ಒಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕರೆತರಲು ನೆರವಾಗಿದ್ದಾರೆ.

ಬಸ್‌ನಲ್ಲಿ ಒಟ್ಟು 49 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಇಬ್ಬರು ಬೋಧಕ ಸಿಬ್ಬಂದಿ ಹಾಗೂ ಒಬ್ಬ ಬೋಧಕೇತರ ಸಿಬ್ಬಂದಿ ಇದ್ದರು ಎಂದು ಗಾಯಗೊಂಡ ವಿದ್ಯಾರ್ಥಿ ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.