ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ
nursing students died and 20 others were injured after a private tourist bus carrying students overturned near Aymangala in Chitradurga district, Karnataka.
ಚಿತ್ರದುರ್ಗ: ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 20 ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡ ವಿದ್ಯಾರ್ಥಿಯೊಬ್ಬರ ಮಾಹಿತಿ ಪ್ರಕಾರ, ರಾತ್ರಿ ಸುಮಾರು 10.30ರ ವೇಳೆಗೆ ಬಸ್‌ನಲ್ಲಿದ್ದ ಬಹುತೇಕ ವಿದ್ಯಾರ್ಥಿಗಳು ನಿದ್ರೆಗೆ ಜಾರಿದ್ದರು. ಈ ವೇಳೆ ಏಕಾಏಕಿ ಬಸ್ ಅಪಘಾತಕ್ಕೀಡಾಗಿದ್ದು, ವಿದ್ಯಾರ್ಥಿಗಳು ಆತಂಕದಿಂದ ಕೂಗಿಕೊಂಡಿದ್ದಾರೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬಸ್‌ನ ಕಿಟಕಿಗಳನ್ನು ಒಡೆದು, ಒಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕರೆತರಲು ನೆರವಾಗಿದ್ದಾರೆ.
ಬಸ್‌ನಲ್ಲಿ ಒಟ್ಟು 49 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಇಬ್ಬರು ಬೋಧಕ ಸಿಬ್ಬಂದಿ ಹಾಗೂ ಒಬ್ಬ ಬೋಧಕೇತರ ಸಿಬ್ಬಂದಿ ಇದ್ದರು ಎಂದು ಗಾಯಗೊಂಡ ವಿದ್ಯಾರ್ಥಿ ತಿಳಿಸಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…