Headlines

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

Screenshot 2026 08 20 14 55 46 154 com.openai.chatgpt edit

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

Ripponpete PSI Rajureddy appeals for peaceful and harmonious Eid Milad celebrations, urging community leaders to maintain law and order and avoid public inconvenience.

ರಿಪ್ಪನ್‌ಪೇಟೆ: ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು.

ಮಂಗಳವಾರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ “ಧರ್ಮ ಎಲ್ಲರಿಗೂ ಶ್ರೇಷ್ಠ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ ಸಲ್ಲದು. ಪರಸ್ಪರರ ಹಬ್ಬಗಳಲ್ಲಿ ಭಾಗವಹಿಸುವ ಮೂಲಕ ಭಾವೈಕ್ಯತೆ ಬೆಳೆಸಬೇಕು. ಅದುವೇ ನಿಜವಾದ ಸಂಭ್ರಮ,” ಎಂದು ಪಿಎಸ್‌ಐ ರಾಜುರೆಡ್ಡಿ ಹೇಳಿದರು.

ಸೆಪ್ಟೆಂಬರ್ 3ರಿಂದ 6ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾಮೂಹಿಕ ಮೆರವಣಿಗೆಯಲ್ಲಿ ಹೆಚ್ಚಿನ ಕರ್ಕಶ ಧ್ವನಿವರ್ಧಕಗಳನ್ನು ಬಳಸಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆಯಂಚಿನಲ್ಲಿ ಬ್ಯಾನರ್, ಪ್ಲೆಕ್ಸ್ ಹಾಗೂ ವಿದ್ಯುತ್ ದೀಪಾಲಂಕಾರಗಳನ್ನು ಅಳವಡಿಸಬೇಕು ಎಂದು ಅವರು ಸೂಚಿಸಿದರು.

ರಿಪ್ಪನ್‌ಪೇಟೆಯಲ್ಲಿ ವಿವಿಧ ಸಮುದಾಯದವರು ತಮ್ಮ ತಮ್ಮ ಹಬ್ಬಗಳನ್ನು ಅನ್ಯೋನ್ಯವಾಗಿ ಆಚರಿಸಿಕೊಂಡು ಬರುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ ಮುಸ್ಲಿಂ ಮುಖಂಡ ಆರ್.ಎ. ಚಾಬುಸಾಬ್, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ಅಧ್ಯಕ್ಷ ಸುಧೀಂದ್ರ ಪೂಜಾರಿ, ಆಸೀಫ್ ಭಾಷಾ ,ಈದ್ ಮಿಲಾದ್ ಸಮಿತಿ ಅಧ್ಯಕ್ಷ ಇಸ್ಮಾಯಿಲ್ , ಎಂ. ಸುರೇಶ್ ಸಿಂಗ್, ಎಂ.ಬಿ. ಮಂಜುನಾಥ, ಹೆಚ್.ವಿ. ಈಶ್ವರಪ್ಪಗೌಡ ಹಾರೋಹಿತ್ತಲು, ಸುಂದರೇಶ್, ನಿರೂಪ್ ಕುಮಾರ್, ಪಿ ರಮೇಶ್ ಸೇರಿದಂತೆ ಹಲವರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಹಂಚಿಕೊಂಡರು.

ಬಿಲ್ಲೇಶ್ವರ, ಕೋಡೂರು, ಕೆಂಚನಾಲ, ಗಾಳಿಬೈಲು, ಗರ್ತಿಕೆರೆ, ಎಣ್ಣೆನೋಡ್ಲು ಸೇರಿದಂತೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳ ಮಸೀದಿ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಗ್ರಾಮಗಳಲ್ಲಿ ನಡೆಯಲಿರುವ ಈದ್ ಮಿಲಾದ್ ಆಚರಣೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.