w
Headlines
Home » ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

JPEG 20260816 111538

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

A man was allegedly brutally assaulted at Garthikere in Shivamogga district. The injured victim was shifted to a private hospital in Shivamogga for treatment.

ಗರ್ತಿಕೆರೆ: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಆತನ ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದಿರುವ ಘಟನೆ ಗರ್ತಿಕೆರೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗರ್ತಿಕೆರೆ ಗ್ರಾಮದ ರಾಘವೇಂದ್ರ ಅಲಿಯಾಸ್ ಆಪಲ್ ರಾಘು ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಮಂಜುನಾಥ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಆರೋಪಿ ರಾಘು ಮನೆಯಲ್ಲಿ ಮದ್ಯ ಸೇವಿಸಿ ಬಳಿಕ ಗರ್ತಿಕೆರೆಯ ಅವುಕ ಸರ್ಕಲ್‌ಗೆ ಬಂದಿದ್ದ ಎನ್ನಲಾಗಿದ್ದು, ಅಲ್ಲಿ ತನ್ನೊಂದಿಗೆ ಮದ್ಯ ಸೇವಿಸಿದ್ದ ಮಂಜುನಾಥ್‌ನೊಂದಿಗೆ ಏಕಾಏಕಿ ಗಲಾಟೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮಾತಿನ ಚಕಮಕಿ ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕಬ್ಬಿಣದ ರಾಡ್‌ನಿಂದ ಮಂಜುನಾಥ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿದ ಬಳಿಕ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್‌ನ ತಲೆಯ ಮೇಲೆ ಆರೋಪಿ ಕಾಲಿಟ್ಟು ಅಟ್ಟಹಾಸ ಮೆರೆದಿರುವ ದೃಶ್ಯವೂ ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮಾಹಿತಿ ಹಾಗೂ ಘಟನೆಯ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ನಿಖರ ಕಾರಣವೇನು ಹಾಗೂ ಹಲ್ಲೆಯ ಸಂದರ್ಭ ಏನಾಯಿತು ಎಂಬುದರ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.