ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

Satish Ripponpete donated a TV to GHPS Bellur during the 80th Independence Day celebration and urged the public to support government school development.

ಬೆಳ್ಳೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS) ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಈ ಬಾರಿ ಧ್ವಜಾರೋಹಣದ ಜೊತೆಗೆ ಶಾಲೆಯ ಅಭಿವೃದ್ಧಿಗೆ ವಿವಿಧ ದಾನಿಗಳು ನೀಡಿದ ಕೊಡುಗೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಿಪ್ಪನ್‌ಪೇಟೆ ಅವರು ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ನೀಡಿದರು. ಶಾಲೆಗೆ ಟಿವಿ ಹಸ್ತಾಂತರಿಸಿ ಮಾತನಾಡಿದ ಅವರು,“ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಸಾರ್ವಜನಿಕರು ಹಾಗೂ ದಾನಿಗಳು ಕೂಡ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕೈಜೋಡಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ,” ಎಂದು ಸತೀಶ್ ರಿಪ್ಪನ್‌ಪೇಟೆ ಹೇಳಿದರು.

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ

GHPS ಬೆಳ್ಳೂರು SDMC ಅಧ್ಯಕ್ಷರು ಹಾಗೂ ಸದಸ್ಯರು ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಇದೇ ವೇಳೆ ಬೆಂಗಳೂರಿನ ನಾವೆಲ್ ಹೋಪ್ ಫೌಂಡೇಶನ್ ಅಧ್ಯಕ್ಷೆ ಪೌಜಿಯಾ ಹಾಗೂ ಶಿವಮೊಗ್ಗದ ನಲಿಕಲಿ ತಂಡದ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ತಟ್ಟೆ, ವಾಟರ್ ಬಾಟಲ್ ಹಾಗೂ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ: SDMC ಅಧ್ಯಕ್ಷ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ SDMC ಅಧ್ಯಕ್ಷ ರಾಘವೇಂದ್ರ ಅವರು ಮಾತನಾಡಿ, ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ಕಡಿಮೆ ಮಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಶಿಕ್ಷಣಾಸಕ್ತ ವಸಂತಕುಮಾರ್ ಅವರು ಶಿಕ್ಷಣದ ಜೊತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಅಗತ್ಯವನ್ನು ಒತ್ತಿಹೇಳಿದರು. ತಿಮ್ಮಪ್ಪ ಅವರು ಮಕ್ಕಳು ಸ್ವಾಭಿಮಾನಿ ಹಾಗೂ ದೇಶಭಿಮಾನಿಗಳಾಗಿ ಬೆಳೆಯಬೇಕು ಎಂದು ಹಾರೈಸಿದರು.

SDMC ಸದಸ್ಯ ರವಿ ಎಂ.ಎಸ್. ಮಾತನಾಡಿ, “ಸ್ವಾತಂತ್ರ್ಯವೆಂದರೆ ಕೇವಲ ಹಕ್ಕಲ್ಲ, ಅದರೊಂದಿಗೆ ಜವಾಬ್ದಾರಿಯೂ ಇದೆ. ಪ್ರತಿಯೊಬ್ಬರೂ ಇದನ್ನು ಅರಿತು ಬದುಕಬೇಕು,” ಎಂದು ಹೇಳಿದರು.

7ನೇ ತರಗತಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯ ಶಿಕ್ಷಕಿ ವನಜ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ವಿದ್ಯಾರಾಣಿ ಸ್ವಾಗತಿಸಿದರು. ಶಿಕ್ಷಕ ಮೋಹನ್ ಕುಮಾರ್ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಭಾಗ್ಯ, ರವೀಂದ್ರ ಗೌಡ, ಕವಿತಾ, ಪ್ರತಿಮಾ, ರಾಜ್ ಕುಮಾರ್, ಗೀತಾ, ಹರೀಶ್ ಕುಮಾರ್, ಮಂಜುನಾಥ್, ಗಂಗಾಧರ್, ದೇವೇಂದ್ರಪ್ಪ ಗೌಡ ಸೇರಿದಂತೆ ಹಲವು ಗಣ್ಯರು, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

11 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

13 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

20 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

1 day ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

1 day ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

1 day ago