ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

Awareness campaign conducted by Government High School, Ripponpete, along with education, panchayat, child protection and police departments to bring long-term absent students back to school. Three students re-enrolled.

ರಿಪ್ಪನ್‌ಪೇಟೆ: ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯಿತಿ ಹೊಸನಗರ, ಮಕ್ಕಳ ರಕ್ಷಣಾ ಸಮಿತಿ, ಗ್ರಾಮ ಪಂಚಾಯಿತಿ ರಿಪ್ಪನ್‌ಪೇಟೆಯ ಹೆಣ್ಣು ಮಕ್ಕಳ ಸುರಕ್ಷತಾ ಸಮಿತಿ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆ.24 ಮತ್ತು 25ರಂದು ಸರ್ಕಾರಿ ಪ್ರೌಢಶಾಲೆ, ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ಅಭಿಯಾನದ ಅಂಗವಾಗಿ ಶಾಲೆಗೆ ಗೈರುಹಾಜರಾಗಿರುವ ವಿದ್ಯಾರ್ಥಿಗಳ ಮನೆಗಳಿಗೆ ತಂಡದ ಸದಸ್ಯರು ಭೇಟಿ ನೀಡಿ, ಮಕ್ಕಳೊಂದಿಗೆ ಹಾಗೂ ಪೋಷಕರೊಂದಿಗೆ ಮಾತುಕತೆ ನಡೆಸಿ, ಶಿಕ್ಷಣದ ಮಹತ್ವವನ್ನು ತಿಳಿಸಿದರು. ಮಕ್ಕಳನ್ನು ಮತ್ತೆ ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಮನವಿ ಮಾಡಿ, ಶಾಲಾ ಶಿಕ್ಷಣದಿಂದ ದೂರ ಉಳಿಯದಂತೆ ಮಕ್ಕಳನ್ನು ಮನವೊಲಿಸಲಾಯಿತು.

ಅಭಿಯಾನದ ಫಲವಾಗಿ ಮೂರು ವಿದ್ಯಾರ್ಥಿಗಳು ಪುನಃ ಶಾಲೆಗೆ ದಾಖಲಾಗಿದ್ದಾರೆ. ಇನ್ನೂ ಶಾಲೆಗೆ ಹಾಜರಾಗದಿರುವ ವಿದ್ಯಾರ್ಥಿಗಳೂ ಶೀಘ್ರದಲ್ಲೇ ಶಾಲೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ.ಶಾಲೆಯಿಂದ ದೂರ ಉಳಿದಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವ ಈ ಜಾಗೃತಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ.

ಅಭಿಯಾನದಲ್ಲಿ ಡಿಪಿಯುಸಿ ರಿಪ್ಪನ್‌ಪೇಟೆಯ ಪ್ರಭಾರ ಉಪಪ್ರಾಂಶುಪಾಲರಾದ ಸುಧಾ ಹೆಗಡೆ, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಬಿಆರ್‌ಪಿ ಮಂಜುಳಾ, ಸಿಆರ್‌ಪಿ ಮಂಜುನಾಥ್, ಪೊಲೀಸ್ ಕಾನ್ಸ್‌ಟೇಬಲ್ ನವೀನ್, ಪರಮೇಶ್, ಸಿಆರ್‌ಪಿ ನಾಗರಾಜ್, ಶಿಕ್ಷಕರಾದ ಚಂದ್ರಪ್ಪ ಕೆ., ಸುಷ್ಮಾ, ನಾಗಮಣಿ ಹಾಗೂ ಪಂಚಾಯಿತಿ ಸಿಬ್ಬಂದಿಗಳಾದ ಲಕ್ಷ್ಮಿ, ಶಾಲಿನಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago