ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ !

Four people were arrested for allegedly preparing to hunt wildlife at night in the Sirigere forest area of Hanagere Wildlife Range in Shivamogga.

ಶಿವಮೊಗ್ಗ: ತಾಲೂಕಿನ ಹಣಗೇರಿ ವನ್ಯಜೀವಿ ವಲಯದ ಸಿರಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವನ್ಯಜೀವಿಗಳ ಬೇಟೆಗೆ ಸಜ್ಜಾಗಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಘಟನೆ ನಿನ್ನೆ ರಾತ್ರಿ ಸುಮಾರು 11.15ರ ವೇಳೆಗೆ ನಡೆದಿದೆ.

ಅರಣ್ಯ ತನಿಖಾ ಠಾಣೆಯ ಸಮೀಪದ ಅರಣ್ಯ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದ ಸಿಬ್ಬಂದಿ ಆರೋಪಿಗಳು ಬೇಟೆಗೆ ಸಿದ್ಧತೆ ನಡೆಸುತ್ತಿರುವುದನ್ನು ಗಮನಿಸಿದ್ದಾರೆ.

ತಕ್ಷಣ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ನಾಲ್ವರನ್ನು ಸುತ್ತುವರಿದು ಬಂಧಿಸಿದ್ದಾರೆ. ಆರೋಪಿಗಳು ವನ್ಯಜೀವಿಗಳ ಬೇಟೆಗೆ ಬಳಸಲು ಶಸ್ತ್ರಾಸ್ತ್ರಗಳು ಹಾಗೂ ಇತರೆ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಿಂದ ಎರಡು ಒಂಟಿ ನಳಿಕೆಯ ನಾಡ ಬಂದೂಕುಗಳು, ಮಾರುತಿ ಓಮಿನಿ ವಾಹನ, ಒಂದು ಕತ್ತಿ, ಚಾಕು, ಗನ್ ಪೌಡರ್, ಲೋಹದ ಗುಂಡುಗಳು ಹಾಗೂ ಬ್ಯಾಟರಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago