ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
Hosanagar BJP stages a massive protest against the Congress government’s alleged administrative failures, farmer issues, power problems, social security delays and development concerns.
ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನರಿಗೆ ವಿವಿಧ ಭರವಸೆಗಳನ್ನು ನೀಡಿ ಇದೀಗ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದೆ. ಹೊಸ ಸಚಿವರಿಗೆ ಖಾತೆ ಹಂಚಿಕೆ ಸೇರಿದಂತೆ ಆಂತರಿಕ ವಿಚಾರಗಳಲ್ಲಿ ಸರ್ಕಾರ ಮಗ್ನವಾಗಿದ್ದು, ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯಗೊಂಡಿದೆ ಎಂದು ಅವರು ಆರೋಪಿಸಿದರು.
ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ವಿಳಂಬ, ಗ್ರಾಮ ಪಂಚಾಯಿತಿಗಳಿಗೆ ಅವೈಜ್ಞಾನಿಕ ಮೀಸಲಾತಿ ಪ್ರಕಟಣೆ, ಮಳೆ ಮಾಪನ ವ್ಯವಸ್ಥೆಯಲ್ಲಿನ ಸಮಸ್ಯೆಗಳಿಗೆ ಕ್ರಮ ಕೈಗೊಳ್ಳದಿರುವುದು ಹಾಗೂ ರೈತರ ಸಮಸ್ಯೆಗಳ ನಿರ್ಲಕ್ಷ್ಯವನ್ನು ಪ್ರತಿಭಟನಾಕಾರರು ಖಂಡಿಸಿದರು.
ಹೊಸನಗರ ತಾಲೂಕಿನ ಜವಾಬ್ದಾರಿ ಹೊಂದಿರುವ ಸಾಗರ ಕ್ಷೇತ್ರದ ಶಾಸಕರು ತಾಲೂಕನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಹೊಸನಗರ ತಾಲೂಕನ್ನೇ ಮೆಸ್ಕಾಂ ಇಲಾಖೆ ವಿದ್ಯುತ್ ಸಮಸ್ಯೆಯಿಂದ ಕತ್ತಲಲ್ಲಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಕೃಷಿ ನೀರಾವರಿಗೆ ಸಬ್ಸಿಡಿ ನೀಡದಿರುವುದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳು ಹಾಗೂ ಬಡವರ ಮೂಲಭೂತ ಸಮಸ್ಯೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಚೌಡಮ್ಮ ರಸ್ತೆಯಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಬಿಜೆಪಿ ಮುಖಂಡರಾದ ಉಮೇಶ್ ಕಂಚುಗಾರ್, ಸುರೇಶ್ ಸ್ವಾಮಿರಾವ್, ಕೆ.ಎಸ್. ಪ್ರಶಾಂತ್, ಆರ್.ಟಿ. ಗೋಪಾಲ್, ಯುವರಾಜ್, ನಾಗರತ್ನ ದೇವರಾಜ್, ಪದ್ಮಾ, ಸುರೇಶ್, ನಿರ್ಮಲ, ಗಣೇಶ್, ಶಶಿಕಲಾ, ಸುಮಾ, ಆಶಾ, ಮಾಲಾ, ನಾಗರಾಜ್, ಕಾವ್ಯ ಎಂ.ಎನ್., ಸುಧಾಕರ್, ಎನ್.ಆರ್. ದೇವಾನಂದ್, ತಾಲೂಕು ಅಧ್ಯಕ್ಷ ಸತೀಶ್ ಹಾಲಗದ್ದೆ, ಉಮೇಶ್ ಎ.ವಿ., ಮಲ್ಲಿಕಾರ್ಜುನ್ ಆಲುವಳ್ಳಿ, ವೀರೇಶ್ ಕೆ.ವಿ., ಕೃಷ್ಣಮೂರ್ತಿ, ಮಂಡಾನಿ ಮೋಹನ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…
ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…
ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga…
ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…
ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…
ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…